ಗಣಿ ಭಾದಿತ ಗ್ರಾಮಗಳಲ್ಲಿ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ರೈತರಿಂದ ಅರ್ಜಿ ಆಹ್ವಾನ
ಹೊಸಪೇಟೆ, 18 ಜುಲೈ (ಹಿ.ಸ.) : ಆ್ಯಂಕರ್ : ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ, ಹೊಸಪೇಟೆ ತಾಲೂಕಿನ ಗಣಿಭಾದಿತ 58 ಗ್ರಾಮಗಳಲ್ಲಿ ತೋಟಗಾರಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೊಟಗಾರಿಕೆ ಇಲಾಖೆಯ ಉಪನಿರ್ದೇಶಕ ಪಿ.ಜಿ.ಚಿದಾನಂದಪ್ಪ ಅವರು ತಿಳಿಸಿ
ಗಣಿ ಭಾದಿತ ಗ್ರಾಮಗಳಲ್ಲಿ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ರೈತರಿಂದ ಅರ್ಜಿ ಆಹ್ವಾನ


ಹೊಸಪೇಟೆ, 18 ಜುಲೈ (ಹಿ.ಸ.) :

ಆ್ಯಂಕರ್ : ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ, ಹೊಸಪೇಟೆ ತಾಲೂಕಿನ ಗಣಿಭಾದಿತ 58 ಗ್ರಾಮಗಳಲ್ಲಿ ತೋಟಗಾರಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೊಟಗಾರಿಕೆ ಇಲಾಖೆಯ ಉಪನಿರ್ದೇಶಕ ಪಿ.ಜಿ.ಚಿದಾನಂದಪ್ಪ ಅವರು ತಿಳಿಸಿದ್ದಾರೆ.

ತೋಟಗಾರಿಕೆ ಚಟುವಟಿಕೆಗಳಾದ ವೈಯಕ್ತಿಕ ನೀರು ಸಂಗ್ರಹಣ ಘಟಕ, ಈರುಳ್ಳಿ ಸಂಗ್ರಹಣ ಘಟಕ, ಫಾರಂ ಗೇಟ್ ಪ್ಯಾಕ್ ಹೌಸ್ ಹಾಗೂ ಪ್ರದೇಶ ವಿಸ್ತರಣೆಯ ಡ್ರಾಗನ್ ಪ್ರೂಟ್, ದಾಳಿಂಬೆ, ಮಾವು, ತೆಂಗು, ನಿಂಬೆಯ ತೋಟಗಾರಿಕೆ ಚಟುಟಿಕೆಗಳನ್ನು ಪ್ರಾರಂಭಿಸುವ ಆಸಕ್ತ ರೈತರು ಹೊಸಪೇಟೆ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ಕಮಲಾಪುರ ಮೊ.8123465548, ಹೊಸಪೇಟೆ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.9901555690 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.8310291867 ಈ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande