ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ
ನವದೆಹಲಿ, 18 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರದ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಬಾಂಬ್ ಬೆದರಿಕೆ ಕರೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಬಾಂಬ್ ಬೆದರಿಕೆ ಬಗ್ಗೆ ಮಾಹಿತಿ ತಿಳಿದು ಅಗ್ನಿಶಾಮಕ ಮತ್ತು ದೆಹಲಿ ಪೊಲೀಸ
ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ


ನವದೆಹಲಿ, 18 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರದ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.

ಬಾಂಬ್ ಬೆದರಿಕೆ ಕರೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ.

ಬಾಂಬ್ ಬೆದರಿಕೆ ಬಗ್ಗೆ ಮಾಹಿತಿ ತಿಳಿದು ಅಗ್ನಿಶಾಮಕ ಮತ್ತು ದೆಹಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದ ಶಾಲೆ, ರೋಹಿಣಿ ಅಭಿನವ್ ಪಬ್ಲಿಕ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಇದು ದೆಹಲಿ ಶಾಲೆಗಳಿಗೆ ಈ ವಾರದ ನಾಲ್ಕನೆಯ ಬಾಂಬ್ ಬೆದರಿಕೆ ಕರೆಯಾಗಿದೆ.

ಬೆದರಿಕೆ ಕರೆ ಕಳುಹಿಸಿದ ವ್ಯಕ್ತಿ ಪತ್ತೆಗೆ ಪೋಲಿಸರು ಕಾರ್ಯಪ್ರವೃತರಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande