ಮೈಸೂರು, 18 ಜುಲೈ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ, ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳ ವಿಲೇವಾರಿ ಪ್ರಕರಣದ ಕುರಿತು ಎಸ್ಐಟಿ ತನಿಖೆಯಾಗಬೇಕು ಎಂದು ನಿವೃತ್ತ ನ್ಯಾ. ಗೋಪಾಲ ಗೌಡ ಅವರು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರಕಾರ ನ್ಯಾ. ಗೋಪಾಲಗೌಡ ಅವರ ಆಗ್ರಹದ ಪರವೂ ಅಲ್ಲ, ವಿರೋಧವೂ ಅಲ್ಲ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸುತ್ತೇವೆ. ಆ ನಂತರ ಎಸ್ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa