ಎಕ್ಕ' ಸಿನಿಮಾ ಅದ್ಧೂರಿಯಾಗಿ ಬಿಡುಗಡೆ
ಬೆಂಗಳೂರು, 18 ಜುಲೈ (ಹಿ.ಸ.) : ಆ್ಯಂಕರ್ : ರಾಜಕುಮಾರ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ''ಎಕ್ಕ'' ಚಿತ್ರವು ಇಂದು ರಾಜ್ಯದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಕಳೆದ ಕೆಲವು ವಾರಗಳಿಂದ ಅಬ್ಬರದ ಪ್ರಚಾರ
Ekka


ಬೆಂಗಳೂರು, 18 ಜುಲೈ (ಹಿ.ಸ.) :

ಆ್ಯಂಕರ್ : ರಾಜಕುಮಾರ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ 'ಎಕ್ಕ' ಚಿತ್ರವು ಇಂದು ರಾಜ್ಯದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಕಳೆದ ಕೆಲವು ವಾರಗಳಿಂದ ಅಬ್ಬರದ ಪ್ರಚಾರ, ಪ್ರಭಾವಶಾಲಿ ಟ್ರೇಲರ್, ಪೋಸ್ಟರ್‌ಗಳ ಮೂಲಕ ಗಮನ ಸೆಳೆದಿದ್ದ ಈ ಸಿನಿಮಾ ಇದೀಗ ಬೆಳ್ಳಿತೆರೆಯ ಮೇಲೆ ವಿಜಯದ ಹೆಜ್ಜೆ ಇಟ್ಟಿದೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಭೋಗೇಂದ್ರ, ಯೋಗಿ ಜಿ.ರಾಜ್ ಹಾಗೂ ಕಾರ್ತಿಕ್ ಗೌಡ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಯುವ ರಾಜ್‌ಕುಮಾರ್ ರಗಡ್ ಲುಕ್‌ನಲ್ಲಿ ಅಭಿನಯಿಸಿದ್ದು, ಅವರ ಜೊತೆಯಲ್ಲಿ ಸಂಜನಾ ಆನಂದ್ ಮತ್ತು ಸಂಪದಾ ನಾಯಕಿಯರಾಗಿ ಮಿಂಚಿದ್ದಾರೆ. ಚರಣ್ ರಾಜ್ ಅವರ ಸಂಗೀತ ಮತ್ತು ಸತ್ಯಾ ಹೆಗಡೆ ಅವರ ಛಾಯಾಗ್ರಹಣ ಚಿತ್ರಕ್ಕೆ ಶಕ್ತಿ ತುಂಬಿವೆ.

ಬೆಂಗಳೂರು ಕೆ.ಜಿ.ರಸ್ತೆಯ ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮದ ಘೋಷಣೆಗಳು‌ ಮುಗಿಲು ಮುಟ್ಟಿವೆ. ರಾಜ್ಯದ ಇತರ ಚಿತ್ರಮಂದಿರಗಳಲ್ಲಿಯೂ ಭರ್ಜರಿ ಪ್ರದರ್ಶನ ಕಂಡು ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಪ್ರದರ್ಶನ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande