ಮೀನುಗಾರಿಕೆ ಇಲಾಖೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 18 ಜುಲೈ (ಹಿ.ಸ.) : ಆ್ಯಂಕರ್ : ಮೀನುಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಯೋಜನೆಗಳು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ
ಮೀನುಗಾರಿಕೆ ಇಲಾಖೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 18 ಜುಲೈ (ಹಿ.ಸ.) :

ಆ್ಯಂಕರ್ : ಮೀನುಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಯೋಜನೆಗಳು:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆ ಕಿಟ್‍ಗಳ ವಿತರಣೆ ಮತ್ತು ಮೀನುಗಾರರಿಗೆ ದ್ವಿಚಕ್ರ ವಾಹನ ಖರೀದಿಸಲು ರೂ.25,000 ಸಹಾಯಧನ ನೆರವು ನೀಡಲಾಗುವುದು.

ಅರ್ಹ ಫಲಾನುಭವಿಗಳು ವೆಬ್‍ಸೈಟ್ https://ballari.nic.in/ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸಲ್ಲಿಸಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳೊಡನೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ರಸ್ತೆಯ ನಾಗಲಕೆರೆ ಹತ್ತಿರದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮೊ.9449593156 ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande