ಗೃಹ ಆರೋಗ್ಯ ಯೋಜನೆಗೆ ಬೀದರ್ ನಲ್ಲಿ ಚಾಲನೆ
ಬೀದರ್, 18 ಜುಲೈ (ಹಿ.ಸ.) : ಆ್ಯಂಕರ್ : ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಗೆ ಬೀದರ್ ಜಿಲ್ಲಾ ಪಂಚಾಯತ್‍ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಈ ಯೋಜನೆಯಡಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ
Health


ಬೀದರ್, 18 ಜುಲೈ (ಹಿ.ಸ.) :

ಆ್ಯಂಕರ್ : ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಗೆ ಬೀದರ್ ಜಿಲ್ಲಾ ಪಂಚಾಯತ್‍ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.

ಈ ಯೋಜನೆಯಡಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ ಮೂಲಕ ರಕ್ತದೊತ್ತಡ, ಶುಗರ್, ಅಸ್ವಸ್ಥತೆ, ಪೋಷಣಾ ಕೊರತೆ ಮೊದಲಾದ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲಿದ್ದಾರೆ. ತಕ್ಷಣವೇ ಔಷಧಿ ವಿತರಣೆ ಮತ್ತು ವೈದ್ಯಕೀಯ ಸಲಹೆ ನೀಡುವ ವ್ಯವಸ್ಥೆ ಕೂಡ ಒದಗಿಸಲಾಗುತ್ತದೆ. ಸಾರ್ವಜನಿಕರು ಈ ಸೇವೆಯನ್ನು ಸದ್ಬಳಕೆ ಮಾಡಿಕೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಸಮಸ್ಯೆ ಇರುವಲ್ಲಿ ತಕ್ಷಣ ವೈದ್ಯಕೀಯ ನೆರವನ್ನು ಪಡೆಯಬೇಕು ಎಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande