ಅಕ್ರಮ ಗಾಂಜಾ ಸಾಗಾಟ : ಓರ್ವನ ಬಂಧನ
ಹುಬ್ಬಳ್ಳಿ, 18 ಜುಲೈ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಪೋಲಿಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಗುಡಶೆಡ್ ರೋಡ ಬಳಿ ಶಹರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ನಾಗರಾಜ ಬದ್ದಿ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 2.64 ಕ
Arrest


ಹುಬ್ಬಳ್ಳಿ, 18 ಜುಲೈ (ಹಿ.ಸ.) :

ಆ್ಯಂಕರ್ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಪೋಲಿಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಗುಡಶೆಡ್ ರೋಡ ಬಳಿ ಶಹರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ನಾಗರಾಜ ಬದ್ದಿ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 2.64 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈತ ಒರಿಸ್ಸಾ ರಾಜ್ಯದಿಂದ ಗಾಂಜಾ ತಂದು ಗೋವಾದಲ್ಲಿ ಇರುವ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇದೊಂದು ಸಂಘಟಿತ ಅಪರಾಧದವಾಗಿದ್ದು ಈ ಅಪರಾಧದಲ್ಲಿ ಭಾಗಿಯಾದ ಒರಿಸ್ಸಾ ಮತ್ತು ಗೋವಾ ರಾಜ್ಯದ ವ್ಯಕ್ತಿಗಳ ಪತ್ತೆಗೆ ಪೋಲಿಸರು ಜಾಲ ಬೀಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande