ಭಾರತದಿಂದ ಟಿಆರ್‌ಎಫ್ ಜಾಗತಿಕ ಭಯೋತ್ಪಾದಕ ಘೋಷಣೆಗೆ ಸ್ವಾಗತ
ನವದೆಹಲಿ, 18 ಜುಲೈ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಆಧಾರಿತ ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿರುವ ಅಮೆರಿಕ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರಕ್ಕೆ ಭಾರತ ಬೆಂಬಲ ವ್ಯಕ್ತಪಡಿಸಿದೆ.
Trf


ನವದೆಹಲಿ, 18 ಜುಲೈ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನ ಆಧಾರಿತ ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿರುವ ಅಮೆರಿಕ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರಕ್ಕೆ ಭಾರತ ಬೆಂಬಲ ವ್ಯಕ್ತಪಡಿಸಿದೆ.

ಅಮೆರಿಕದ ವಿದೇಶಾಂಗ ಇಲಾಖೆ ಟಿಆರ್‌ಎಫ್ ಅನ್ನು “ವಿದೇಶಿ ಭಯೋತ್ಪಾದಕ ಸಂಘಟನೆ ಹಾಗೂ “ವಿಶೇಷವಾಗಿ ಗುರುತಿಸಲಾದ ಜಾಗತಿಕ ಭಯೋತ್ಪಾದಕ ” ಎಂದು ಪಟ್ಟಿ ಮಾಡಿದ್ದು, ಈ ಕ್ರಮವನ್ನು ಭಾರತ ಸರ್ಕಾರ ಸ್ವಾಗತಿಸಿದೆ. ಈ ಸಂದರ್ಭದಲ್ಲಿ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ನಾಯಕತ್ವವನ್ನು ಭಾರತ ಪ್ರಶಂಸಿಸಿದೆ.

ವಿದೇಶಾಂಗ ಸಚಿವಾಲಯ ನೀಡಿದ ಹೇಳಿಕೆಯಲ್ಲಿ, ಟಿಆರ್‌ಎಫ್ ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಾಗರಿಕರ ಮೇಲಿನ ದಾಳಿಯಂತಹ ಹಲವು ಭಯೋತ್ಪಾದಕ ಚಟುವಟಿಕೆಗಳಿಗೆ ಜವಾಬ್ದಾರಿಯಾಗಿದೆ ಎಂಬುದು ಸ್ಪಷ್ಟವಾಗಿದೆ.

ಭಾರತವು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಗೆ ಬದ್ಧವಿರುವುದಾಗಿ ಹೇಳಿಕೆಯಲ್ಲಿ ಉಲ್ಲೇಖಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹಕಾರದ ಅಗತ್ಯವಿದೆ ಎಂಬುದನ್ನು ಮತ್ತೆ ಒತ್ತಿಹೇಳಲಾಗಿದೆ. ಈ ಕ್ರಮ ಭಾರತ-ಅಮೆರಿಕ ನಡುವಿನ ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande