ಹೊಸಪೇಟೆ, 18 ಜುಲೈ (ಹಿ.ಸ.) :
ಆ್ಯಂಕರ್ : ಪ್ರತಿ ವರ್ಷ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರಿಂದ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಯವರಿಗೆ 2025ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತರು ವೆಬ್ ಸೈಟ್ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಗಳಲ್ಲಿ ಜುಲೈ.31ರೊಳಗೆ ಆನ್‍ಲೈನ್ ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅಗಾಪೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿ.ಸಿ ರವಿ ಸಿವಿಲ್ ಇಂಜಿನಿಯರ್ ಕಟ್ಟಡ, ಅಮರಾವತಿ, ಹೊಸಪೇಟೆ. ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್