ವಿಜಯಪುರ, 18 ಜುಲೈ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ ಶಿಫ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ : 31-08-2025 ಹಾಗೂ ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿವೇತನಕ್ಕೆ ದಿನಾಂಕ : 31-10-2025 ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನು ನ್ಯಾಶನಲ್ ಸ್ಕಾಲರ್ ಶಿಪ್ ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮೊ:9606151149 ಹಾಗೂ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: 9035553337, ಇಂಡಿ ಪರಶುರಾಮ ಭೋಸಲೆ ಮೊ: 9972441464, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: 9980019635, ಬಸವನಬಾಗೇವಾಡಿ ಶಿವಲೀಲಾ ಮೊ: 8722135660 ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: 9740682979 ಹಾಗೂ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande