ಗ್ರಾಮೀಣ ನೀರು ಸರಬರಾಜು ಇಲಾಖೆ ಸಭೆ
ಬೆಂಗಳೂರು, 18 ಜುಲೈ (ಹಿ.ಸ.) : ಆ್ಯಂಕರ್ : ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಭೆ ನಡೆಸಿ ಹಲವು ನಿರ್ದೇಶನಗಳನ್ನು ನೀಡಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು
Meeting


ಬೆಂಗಳೂರು, 18 ಜುಲೈ (ಹಿ.ಸ.) :

ಆ್ಯಂಕರ್ : ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಭೆ ನಡೆಸಿ ಹಲವು ನಿರ್ದೇಶನಗಳನ್ನು ನೀಡಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆ ಪಡೆದು, ಕೆಲವು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು.

- ಎಂಜಿನಿಯರ್‌ಗಳು ವಿಳಂಬ ಪ್ರವೃತ್ತಿಯನ್ನು ಬಿಟ್ಟು, ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ನಿರ್ದಿಷ್ಟ ಸಮಯದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ಆದ್ಯತೆ ನೀಡಬೇಕು.

- ಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಮುಕ್ತಾಯಗೊಂಡ ನಂತರ ಅಗೆದ ರಸ್ತೆಗಳನ್ನು ಯಥಾಸ್ಥಿತಿಗೆ ತರುತ್ತಿಲ್ಲವೆಂಬ ದೂರುಗಳು ಬಹಳಷ್ಟು ಬರುತ್ತಿದೆ. ಎಂಜಿನಿಯರುಗಳು ನೀರು ಸರಬರಾಜು ಕಾಮಗಾರಿ ಮುಗಿದ ನಂತರ ಆದ್ಯತೆಯ ಮೇಲೆ ರಸ್ತೆಗಳನ್ನು ಸರಿಪಡಿಸುವಲ್ಲಿ ಗಮನ ಹರಿಸಬೇಕು.

- ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ವಹಿಸುವ ಮೊದಲು ಅವರ ಬಳಿ ಇರುವ ಯಂತ್ರೋಪಕರಣಗಳು ಮುಂತಾದ ಸಾಮರ್ಥ್ಯವನ್ನು ಪರೀಕ್ಷಿಸಬೇಕು.

- ಏಕಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಗಳಿಗೆ ಮಂಜೂರಾತಿ ಪಡೆದು, ಕಾರ್ಯಗತವಾಗುವ ಸಮಯದಲ್ಲಿ ಎದುರಾಗುವ ಅರಣ್ಯಭೂಮಿ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ, ಯೋಜನೆಗಳನ್ನು ವಿಳಂಬ ಮಾಡಲಾಗುತ್ತಿದೆ. ಹೀಗಾಗಿ, ಯೋಜನಾ ವರದಿ ಸಿದ್ಧಪಡಿಸುವಾಗಲೇ ಎದುರಾಗುವ ಅಡ್ಡಿ ಆತಂಕಗಳನ್ನು ಗಮನಿಸಬೇಕು.

- ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಂಗಳಲ್ಲಿ ಮೂರು ದಿನ ಪಂಚಾಯತ್ ರಾಜ್‌, ಗ್ರಾಮೀಣ ನೀರು ಸರಬರಾಜು ಹಾಗೂ ನರೇಗಾ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಬೇಕು. ಜಿಲ್ಲಾ ಮಟ್ಟದಲ್ಲಿಯೇ ಸಿಇಒಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು.

- ಸಾಕಷ್ಟು ಪ್ರಮಾಣದಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸುವಲ್ಲಿ ಆಲಸ್ಯ ತೋರುವ ಎಂಜಿನಿಯರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ನೀರು ಕಲುಷಿತಗೊಂಡು ಗ್ರಾಮಗಳಲ್ಲಿ ಸಮಸ್ಯೆ ತಲೆದೋರಿದಲ್ಲಿ ಎಂಜಿನಿಯರ್‌ಗಳನ್ನು ಹೊಣೆ ಮಾಡಲಾಗುವುದು.

- ಸಾರ್ವಜನಿಕರಿಂದ ಬರುವ ದೂರುಗಳನ್ನು ತಮ್ಮ ಮೇಜಿನಿಂದ ಕಳುಹಿಸಿದಲ್ಲಿ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ. ದೂರನ್ನು ಪೂರ್ಣವಾಗಿ ಪರಿಹರಿಸುವ ಮೂಲಕ ಜನರ ಸಮಸ್ಯೆಗಳನ್ನು ದೂರ ಮಾಡಬೇಕು. ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಬರುವ ದೂರುಗಳನ್ನು ಅಂದೇ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಕ್ರಮ ಕೈಗೊಂಡು ಸೂಕ್ತ ಸ್ಪಷ್ಟನೆ ನೀಡಬೇಕು.

ಇದೇ ವೇಳೆ, ಜಿಲ್ಲಾವಾರು ಪ್ರಗತಿಯನ್ನು ಪರಿಶೀಲಿಸಿ, ಕಡಿಮೆ ಪ್ರಗತಿ ಸಾಧಿಸಿದ ಎಂಜಿನಿಯರ್‌ಗಳಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande