ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ
ಹೈದರಾಬಾದ್, 19 ಜುಲೈ (ಹಿ.ಸ.) : ಆ್ಯಂಕರ್ : ಹೈದರಾಬಾದ್‌ನಿಂದ ಥೈಲ್ಯಾಂಡ್‌ನ ಫುಕೆಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (ಸಂಖ್ಯೆ IX110) ಶನಿವಾರ ಬೆಳಿಗ್ಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಿತು
Air


ಹೈದರಾಬಾದ್, 19 ಜುಲೈ (ಹಿ.ಸ.) :

ಆ್ಯಂಕರ್ : ಹೈದರಾಬಾದ್‌ನಿಂದ ಥೈಲ್ಯಾಂಡ್‌ನ ಫುಕೆಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (ಸಂಖ್ಯೆ IX110) ಶನಿವಾರ ಬೆಳಿಗ್ಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಿತು.

ಬೋಯಿಂಗ್ 737 ಮ್ಯಾಕ್ಸ್ 8 ವಿಮಾನವು ಬೆಳಿಗ್ಗೆ 6:41ಕ್ಕೆ ಹಾರಾಟ ಆರಂಭಿಸಿ, 6:57ಕ್ಕೆ ಮರಳಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಷದ ನಿಖರ ಕಾರಣವನ್ನು ವಿಮಾನಯಾನ ಸಂಸ್ಥೆ ಬಹಿರಂಗಪಡಿಸಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande