ಧಾರವಾಡ, 19 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಅಭ್ಯರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗೆ ಇರುವ ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಕಾನೂನು ಪದವೀಧರರು www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ಗಳ ಶಿಷ್ಯವೇತನವನ್ನು ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನದಂತೆ 2 ವರ್ಷಗಳ ಕಾಲ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa