ಕಬ್ಬು ಬೆಳೆಗಾರರಿಂದ ಅರ್ಜಿ ಆಹ್ವಾನ
ಧಾರವಾಡ, 19 ಜುಲೈ (ಹಿ.ಸ.) : ಆ್ಯಂಕರ್ : 2025–26 ನೇ ಸಾಲಿನ ಹೈ-ಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿಯಲ್ಲಿ ಸಾಮಾನ್ಯ ರೈತರಿಗೆ ಕಂಬ್ಯೆನ್ಡ್ ಹಾರ್ವೆಸ್ಟರ್ ಹಬ್ ಹಾಗೂ ಶುಗರ್ ಕೇನ್ ಹಾರ್ವೆಸ್ಟರ್ ಹಬ್ ಅನುಷ್ಠಾನಕ್ಕಾಗಿ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಎಫ್‌ಐಡಿ ಹೊಂದಿರುವ ರೈತ
ಕಬ್ಬು ಬೆಳೆಗಾರರಿಂದ ಅರ್ಜಿ ಆಹ್ವಾನ


ಧಾರವಾಡ, 19 ಜುಲೈ (ಹಿ.ಸ.) :

ಆ್ಯಂಕರ್ : 2025–26 ನೇ ಸಾಲಿನ ಹೈ-ಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿಯಲ್ಲಿ ಸಾಮಾನ್ಯ ರೈತರಿಗೆ ಕಂಬ್ಯೆನ್ಡ್ ಹಾರ್ವೆಸ್ಟರ್ ಹಬ್ ಹಾಗೂ ಶುಗರ್ ಕೇನ್ ಹಾರ್ವೆಸ್ಟರ್ ಹಬ್ ಅನುಷ್ಠಾನಕ್ಕಾಗಿ ಸಹಾಯಧನ ನೀಡಲಾಗುತ್ತಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಎಫ್‌ಐಡಿ ಹೊಂದಿರುವ ರೈತರು ಮಾತ್ರ ಅರ್ಹರು. ಸಹಾಯಧನವನ್ನು ಶೇ. 40 ರಿಂದ ಶೇ. 50 ರವರೆಗೆ (ಎಲ್-1 ದರಕ್ಕೆ) ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ, ಅರ್ಜಿದಾರರು ತಾತ್ವಿಕ ಸಾಲ ಮಂಜೂರಾತಿ ಪತ್ರ ಹಾಗೂ ಶುಗರ್ ಕೇನ್ ಹಬ್ ಗೆ ಸಂಬಂಧಿಸಿದವರು ತಮ್ಮ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಕಟಾವು ಒಪ್ಪಂದ ಪತ್ರ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 5, 2025. ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಧಾರವಾಡ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande