ಬೆಂಗಳೂರು, 19 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ಮೂಲಕ ಸಣ್ಣ ವ್ಯಾಪಾರಿಗಳಿಗೆ ನೋಟೀಸ್ ನೀಡಿ ಭಯದ ವಾತಾವರಣ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಬಿಜೆಪಿ ವತಿಯಿಂದ ಸಣ್ಣ ವ್ಯಾಪಾರಿಗಳ ಹಿತರಕ್ಷಣೆಗಾಗಿ ಸಹಾಯವಾಣಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ಲೆಹರ್ ಸಿಂಗ್ , ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಡಾ. ಕೆ. ನಾರಾಯಣ, ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಜಿ. ಎಸ್. ಪ್ರಶಾಂತ್, ನಿಕಟಪೂರ್ವ ರಾಜ್ಯ ವಕ್ತಾರರಾದ ಜಿ. ವಿ. ಕೃಷ್ಣ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa