ಗದಗ, 19 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಬೆಂಗಳೂರು ಇಲ್ಲಿ ನೀಡಲಾಗುತ್ತಿದ್ದು, ಸದರಿ ತರಬೇತಿಗೆ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಗಸ್ಟ 2 ಆಗಿರುತ್ತದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಶಿ). ವಿದ್ಯಾರ್ಥಿಯು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಕ್ಕಿಂತ ಮೀರಿರಬಾರದು. ವಿದ್ಯಾರ್ಥಿಯ ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳು ಮೀರಿರಬಾರದು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಇವರನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP