ಕಂಕೇರ್, 19 ಜುಲೈ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅತುರ್ಗಾಂವ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಜೀವಂತವಾಗಿ ಸುಟ್ಟು ಸಾವನ್ನಪ್ಪಿದ್ದಾರೆ.
ಬೆಳಗಿನ ಜಾವ 1 ಗಂಟೆ ಸುಮಾರಿಗೆ ಮೂರ್ವಾಂಡ್‌ನಿಂದ ಕಂಕೇರ್ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಯಿತು.
ಕಾರಿನಲ್ಲಿ ಇದ್ದ ಯುವರಾಜ್ ಸೋರಿ (24), ಹೇಮಂತ್, ದೀಪಕ್ ಮತ್ತು ಸೂರಜ್ ಕಾರಿನೊಳಗೆ ಸಿಲುಕಿಕೊಂಡು ಸಜೀವ ದಹನವಾಗಿದ್ದಾರೆ.
ಪ್ರೀತಮ್ ನೇತಮ್ ಹಾಗೂ ಪೃಥ್ವಿರಾಜ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಕೇರ್ ಪೊಲೀಸರು ಮತ್ತು ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಅಪಘಾತಕ್ಕೆ ಅತಿ ವೇಗ ಮತ್ತು ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa