ಬೆಂಗಳೂರು, 19 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಯೊಂದು ಕ್ಷೇತ್ರದ ಜನ ಛೀಮಾರಿ ಹಾಕುತ್ತಿದ್ದಾರೆ. ಶಾಸಕರಾಗಿ ಎರಡೂವರೆ ವರ್ಷಗಳು ಕಳೆದರೂ ಮುಖ್ಯಮಂತ್ರಿಗಳು ಅನುದಾನ ನೀಡುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಅನುದಾನ ಬಿಡುಗಡೆ ಮಾಡುವ ಕಪಟ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು
₹50 ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕರು ಪತ್ರ ಬರೆದಿದ್ದಾರೆ, ಆದರೆ ಅದರಲ್ಲಿ ಎಷ್ಟು ಹಣ ಬಿಡುಗಡೆಯಾಗುತ್ತದೆ ?ಶಾಸಕರ ಕೈಗೆ ಎಷ್ಟು ಅನುದಾನ ಬಿಡುಗಡೆಯಾಗುತ್ತದೆ ? ಎಷ್ಟು ಅಭಿವೃದ್ಧಿ ಕಾರ್ಯಗಳು ಪ್ರಾರಂಭವಾಗುತ್ತವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬುದು ಕಾಂಗ್ರೆಸ್ ಆಡಳಿತದಲ್ಲಿ ನಡೆದುಕೊಂಡು ಬಂದಿದೆ, ಈಗಲೂ ಅದನ್ನು ಮುಂದುವರಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa