ಮಂಡ್ಯ, 19 ಜುಲೈ (ಹಿ.ಸ.) :
ಆ್ಯಂಕರ್ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಉರುಳಿ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ತಕ್ಷಣವೇ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ. ಭಾಗಿಯಾಗಿ ಡಿ.ಕೆ. ಶಿವಕುಮಾರ್ ಮೈಸೂರಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa