ವಿಜಯಪುರ, 19 ಜುಲೈ (ಹಿ.ಸ.) :
ಆ್ಯಂಕರ್ : ಸರ್ಕಾರವು ಹಲವಾರು ಯೋಜನೆಗಳನ್ನು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ರೂಪಿಸಿ ಅನುಷ್ಟಾನಗೊಳಿಸುತ್ತಿದ್ದು, ಅಂತಹ ಯೋಜನಗೆಳನ್ನು ಅನುಷ್ಠಾನ ಇಲಾಖೆಯ ಅಧಿಕಾರಿಗಳು ಮಕ್ಕಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶನಿವಾರ ಮುದ್ದೇಬಿಹಾಳದ ಪ್ರವಾಸಿ ಮಂದಿರದ ಸಭಾಭವನದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಕಟ್ಟುನಿಟಿನ ಸೂಚನೆಯನ್ನು ನೀಡಿದರು.
ಮಕ್ಕಳ ವಿಕಾಸ ಹಾಗೂ ಬೆಳವಣಿಗೆಗೆ ಪೂರಕವಾಗಿ ಅವರ ಸರ್ವಾಂಗೀಣ ವಿಕಾಸ ಸರ್ಕಾರದ ಆಶಯಗಳಂತೆ ತಾಲೂಕಿನಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಬಾಲ ವಿಕಾಸ ಸಮಿತಿ ಸಕ್ರಿಯವಾಗಿರುವಂತೆ ನೋಡಿಕೊಳ್ಳತಕ್ಕದ್ದು ಎಂದು ಹೇಳಿದ ಅವರು ಪ್ರತಿಯೊಂದು ಶಾಲೆ ಅಂಗನವಾಡಿ ಹಾಸ್ಟೆಲು ಎಲ್ಲಾ ಕಡೆ ಮಕ್ಕಳ ಸಹಾಯವಣಿ ಸಂಖ್ಯೆಯನ್ನು ಮಕ್ಕಳಿಗೆ ಕಾಣುವಂತೆ ಸೂಚನಾ ಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಿದ್ದಲ್ಲದೆ ಮಕ್ಕಳೊಂದಿಗೆನೇ ಮಧ್ಯಾಹ್ನದ ಬಿಸಿಯೂಟ ಸವಿದ ಸಂಗಮೇಶ ಬಬಲೇಶ್ವರ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಕುಂಬಾರ್, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ಶ್ರೀಮತಿ ಭಸಂತಿ ಮಠ ಹಾಗೂ ಬಿ ಸಿ ಎಂ ತಾಲೂಕಾ ಅಧಿಕಾರಿ ಶ್ರೀಮತಿ ಶಿವಲೀಲಾ ಕೊಣ್ಣೂರ ಮತ್ತು ಇಲಾಖೆಗಳ ಅಧಿಕಾರಿಗಳು ಮುದ್ದೇಬಿಹಾಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಎಲ್ಲಾ ವಿಭಾಗಗಳ ಅಂಗನವಾಡಿ ಮೇಲ್ವಿಚಾರಕಿಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande