ಸರಕಾರದ ಸಾಧನಾ ಸಮಾವೇಶಕ್ಕೆ ಕ್ಷಣಗಣನೆ
ಮೈಸೂರು, 19 ಜುಲೈ (ಹಿ.ಸ.) : ಆ್ಯಂಕರ್ : ಮೈಸೂರಿನಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ವೇದಿಕೆ ಸಿದ್ಧಗೊಂಡಿದೆ. ನಗರದ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ
ಸಮಾವೇಶ


ಮೈಸೂರು, 19 ಜುಲೈ (ಹಿ.ಸ.) :

ಆ್ಯಂಕರ್ : ಮೈಸೂರಿನಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ವೇದಿಕೆ ಸಿದ್ಧಗೊಂಡಿದೆ. ನಗರದ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್​ನ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಸಾಧನಾ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಭರ್ಜರಿ ತಯಾರಿ ನಡೆದಿದೆ. ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಲಿದ್ದು, ಇದೇ ವೇಳೆ ೨೦೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ‌.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande