ಚಿಕ್ಕಮಗಳೂರಿಗೆ ಭಾರಿ ಮಳೆಯ ಮುನ್ಸೂಚನೆ
ಚಿಕ್ಕಮಗಳೂರು, 19 ಜುಲೈ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ಸೂಚನೆ ನೀಡಿದ್ದು, ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಚಾರಣ ಮಾಡುವ ಪ್ರ
Alert


ಚಿಕ್ಕಮಗಳೂರು, 19 ಜುಲೈ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ಸೂಚನೆ ನೀಡಿದ್ದು, ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಚಾರಣ ಮಾಡುವ ಪ್ರವಾಸಿಗರು ಮತ್ತು ಸ್ಥಳೀಯರು ಹೆಚ್ಚಿನ ಜಾಗೃತೆಯಿಂದ ಇರುವುದು ಅವಶ್ಯಕ. ಗುಡ್ಡ ಹಾಗೂ ಧರೆ ಕುಸಿತದ ಸಾಧ್ಯತೆ ಇರುವುದರಿಂದ, ಅಂತಹ ಪ್ರದೇಶಗಳಿಗೆ ತೆರಳುವುದನ್ನು ನಿಲ್ಲಿಸುವಂತೆ ವಹಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.

ಜಿಲ್ಲಾಡಳಿತ ನೀಡಿರುವ ಪ್ರಮುಖ ಸೂಚನೆಗಳು:

ಪ್ರವಾಸಿಗರು ಪರ್ವತ ಪ್ರದೇಶಗಳಿಗೆ ಹೋಗುವಾಗ ಮುನ್ನೆಚ್ಚರಿಕೆ ವಹಿಸಬೇಕು.

ನದಿಗಳ ಪಕ್ಕವಿರುವ ಪ್ರದೇಶದ ನಿವಾಸಿಗಳು ನದಿಗೆ ಇಳಿಯಬಾರದು.

ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೊದಲು ಹವಾಮಾನ ಮಾಹಿತಿ ಪಡೆಯಬೇಕು.

ವಾರಾಂತ್ಯದಲ್ಲಿ ಹೆಚ್ಚುವರಿ ಪ್ರವಾಸಿಗರ ಭೇಟಿ ನಿರೀಕ್ಷೆಯಲ್ಲಿದ್ದು, ಎಲ್ಲಾ ಪ್ರವಾಸಿ ತಾಣಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande