ವಿಜಯಪುರ, 19 ಜುಲೈ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜುಲೈ 22 ಹಾಗೂ 23 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜುಲೈ 22 ರಂದು ಸಂಜೆ 6 ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜುಲೈ 23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 1 ಗಂಟೆಗೆ ವಿಜಯಪುರದಿಂದ ಬಾಗಲಕೊಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande