ವಿಜಯಪುರ, 19 ಜುಲೈ (ಹಿ.ಸ.) :
ಆ್ಯಂಕರ್ : ಯುಪಿಐ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಟೀಕೆ ವಿಚಾರಕ್ಕೆ ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ ಕಿಡಿಕಾರಿದರು.
ವಿಜಯೇಂದ್ರನಿಗೆ ಸಾಮಾನ್ಯ ಜ್ಞಾನ ಇಲ್ವಾ.? ಯುಪಿಐ ಬಳಕೆ ಮಾಡುವವರಿಗೆ ಐಟಿಯಿಂದ ನೋಟೀಸ್‌ನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದಿದ್ದರು. ಐಟಿ ಬರುವುದು ಕೇಂದ್ರ ಸರ್ಕಾರಕ್ಕೆ ಹೊರತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬರುವುದಿಲ್ಲ ಎಂದು ವಿಜಯೇಂದ್ರಗೆ ಹೇಳಿದರು.
ಅಲ್ಲದೇ, ಆಗಸ್ಟ್‌ನಲ್ಲಿ ಮುಂಗಾರು ಅಧಿವೇಶ ನಡೆಯಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದೇ ತರಹ ವಿಜಯಪುರದಲ್ಲಿ ಸಂಪುಟ ಸಭೆ ನಡೆಯಬೇಕು ಎನ್ನುವುದು ನನ್ನ ಆಶಯ. ಇದರಿಂದ ಗೌರವ ಸಿಗುತ್ತದೆ.
ಉತ್ತರ ಕರ್ನಾಟಕ ಭಾಗದಲ್ಲಿ ಸಭೆಯಿಂದ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಸೆಪ್ಟೆಂಬರ್‌ನಲ್ಲಿ ಸಂಪುಟ ವಿಜಯಪುರದಲ್ಲಿ ಆದ್ರೇ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ ಎಂದು ಸಚಿವ ಪಾಟೀಲ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande