ಖಾಸಗಿ ಬಸ್ ಉರುಳಿ ಬಿದ್ದು 25ಕ್ಕೂ ಹೆಚ್ಚು ಮಂದಿಗೆ ಗಾಯ
ಚಿಕ್ಕಮಗಳೂರು, 19 ಜುಲೈ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಪ್ರವಾಸಿ ಬಸ್ ಉರುಳಿ ಬಿದ್ದ ಪರಿಣಾಮ, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಮೂಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸುಮಾರು 40ಕ್ಕೂ ಹೆಚ್ಚು ಮ
Bus


ಚಿಕ್ಕಮಗಳೂರು, 19 ಜುಲೈ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಪ್ರವಾಸಿ ಬಸ್ ಉರುಳಿ ಬಿದ್ದ ಪರಿಣಾಮ, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮೂಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸುಮಾರು 40ಕ್ಕೂ ಹೆಚ್ಚು ಮಂದಿ ವಾರಾಂತ್ಯದ ಪ್ರವಾಸಕ್ಕಾಗಿ ಕುದುರೆಮುಖ ಮಾರ್ಗವಾಗಿ ನೇತ್ರಾವತಿ ಪೀಕ್ ಟ್ರಕ್ಕಿಂಗ್ ಗೆ ತೆರಳುತ್ತಿದ್ದರು. ಈ ಸಂದರ್ಭ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande