ಬಾಗಲಕೋಟೆ, 19 ಜುಲೈ (ಹಿ.ಸ.) :
ಆ್ಯಂಕರ್ : ದಿಢೀರ್ ಅನಾರೋಗ್ಯದಿಂದ ಪಂಚಮಸಾಲಿ ಕೂಡಲ ಸಂಗಮ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾಮೀಜಿಗಳ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಸ್ವಾಮೀಜಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಕಳೆದ ರಾತ್ರಿಯಿಂದಲೂ ಶ್ರೀಗಳಿಗೆ ತಲೆನೋವು, ವಾಂತಿ, ಎದೆ ನೋವು ಪ್ರಾರಂಭವಾಗಿತ್ತು.
ಇಂದು ಬೆಳಿಗ್ಗೆ ಎದೆ ನೋವು ಹೆಚ್ಚಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚಿಗೆ ಕೂಡಲಸಂಗಮ ಪೀಠಕ್ಕೆ ಬೀಗ ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೇ ಕಾರಣದಿಂದ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದರ ಬೆನ್ನಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa