ಬೆಂಗಳೂರು, 19 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಹೆಬ್ಬಾಳದ ಅಮಾನಿಕೆರೆ ಗ್ರಾಮದಲ್ಲಿ ಪಶ್ಚಿಮ ಬಂಗಾಳ, ಕೋಲ್ಕತ್ತಾದವರು ಎಂದು ಹೇಳಿಕೊಂಡು ಅನೇಕ ಜನರು ಬೀಡು ಬಿಟ್ಟಿದ್ದಾರೆ. ಅವರ ಬಳಿ ನಕಲಿ ಆಧಾರ್ ಕಾರ್ಡ್, ನಕಲಿ ವೋಟರ್ ಐಡಿ ಇದೆ. ಇವರೆಲ್ಲರೂ ಇಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದಾರೆ. ಈ ಜನರು ಇಲ್ಲಿ ಕಸದ ಗುಡ್ಡೆಯನ್ನೇ ಸೃಷ್ಟಿ ಮಾಡಿದ್ದಾರೆ. ಇವರ ಅಕ್ರಮ ಚಟುವಟಿಕೆಯ ಬಗ್ಗೆ ಸರ್ಕಾರವಾಗಲಿ, ಸರ್ಕಾರಿ ಇಲಾಖೆಗಳಾಗಲಿ ತುಟಿ ಬಿಚ್ಚುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಅಕ್ರಮವಾಸಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa