ತೆರಿಗೆ ಸಂಗ್ರಹ ಗುರಿಯಿಂದ ಬೀದಿ ಬದಿ ವ್ಯಾಪಾರಸ್ಥರು ಅತಂತ್ರ : ಬಿಜೆಪಿ
ಬೆಂಗಳೂರು, 19 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೆರಿಗೆ ಸಂಗ್ರಹ ಗುರಿಯಿಂದ ಬೀದಿ ಬದಿ ವ್ಯಾಪಾರಸ್ಥರು ಅತಂತ್ರರಾಗಿದ್ದಾರೆ. ತೆರಿಗೆ ವ್ಯವಸ್ಥೆಯ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಬದಲು ಏಕಾಏಕಿ ವ್ಯಾಪಾರಿಗಳನ್ನು ದೋಚಿ ರಾಜ್ಯದ ಖಜಾನೆ ಭರ್ತಿ ಮಾಡಲು ಹೊರ
ತೆರಿಗೆ ಸಂಗ್ರಹ ಗುರಿಯಿಂದ ಬೀದಿ ಬದಿ ವ್ಯಾಪಾರಸ್ಥರು ಅತಂತ್ರ : ಬಿಜೆಪಿ


ಬೆಂಗಳೂರು, 19 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೆರಿಗೆ ಸಂಗ್ರಹ ಗುರಿಯಿಂದ ಬೀದಿ ಬದಿ ವ್ಯಾಪಾರಸ್ಥರು ಅತಂತ್ರರಾಗಿದ್ದಾರೆ. ತೆರಿಗೆ ವ್ಯವಸ್ಥೆಯ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಬದಲು ಏಕಾಏಕಿ ವ್ಯಾಪಾರಿಗಳನ್ನು ದೋಚಿ ರಾಜ್ಯದ ಖಜಾನೆ ಭರ್ತಿ ಮಾಡಲು ಹೊರಟಿರುವುದು ಖಂಡನೀಯ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ 1.20 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನೀಡಿರುವ ಕಾರಣ ಅಧಿಕಾರಿಗಳು ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಲಕ್ಷಗಟ್ಟಲೆ ತೆರಿಗೆ ನೋಟಿಸ್ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande