ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ : ಎಂ.ಕೆ ಬಾಲಸುಬ್ರಮಣ್ಯ
ಹಾಸನ, 19 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚ
Ksfc


ಹಾಸನ, 19 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಆಯೋಜಿಸಿದ್ದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು ಸಂಸ್ಥೆಯಿಂದ ಹಲವಾರು ಆಕರ್ಷಕ ಬಡ್ಡಿದರ ಯೋಜನೆಗಳಿದ್ದು ಅದರ ಸದುಪಯೋಗ ಪಡೆದು ಉದ್ಯಮಿಗಳಾಗಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವೃತ್ತ (2)ರ ಪ್ರಧಾನ ವ್ಯವಸ್ಥಾಪಕರಾದ ಎನ್.ಎಸ್. ಶಿವಣ್ಣ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಶಾಖಾ ಕಚೇರಿಯ ಶಾಖಾ ವ್ಯವಸ್ಥಾಪಕರಾದ ಬಿ.ಕೆ ರವೀಂದ್ರನಾಥ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande