ಮದ್ಲಾಪೂರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ
ರಾಯಚೂರು, 02 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪೂರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು
ಮದ್ಲಾಪೂರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ


ಮದ್ಲಾಪೂರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ


ರಾಯಚೂರು, 02 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪೂರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ನಡೆಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಸಂಯೋಜಕರಾದ ಬಾವಸಲಿ ಅವರು ಮಾತನಾಡಿ, ವಿಶ್ವಸಂಸ್ಥೆಯು 1987ರಲ್ಲಿ ನಿರ್ಣಯಿಸಿ, ಮಾದಕ ವ್ಯಸನದಿಂದ ಮುಕ್ತವಾದ ಸಮಾಜವನ್ನು ನಿರ್ಮಿಸುವ ಗುರಿಯೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ.

ಧೂಮಪಾನ, ಮದ್ಯಪಾನ ಹಾಗೂ ಗುಟ್ಕಾ ತಂಬಾಕು ಇನ್ನಿತರ ಸೇವನೆಗಳಿಂದ ಇಂದಿನ ಯುವಕರು ಹಾಗೂ ಶಾಲಾ-ಕಾಲೇಜ್‍ವಿದ್ಯಾರ್ಥಿಗಳು ದೂರವಿರಬೇಕು. ಹಾಗೂ ಇಂತಹ ಮಾದಕ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯಕಡೆ ಗಮನ ಹರಿಸಿ, ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ನಾಗರಿಕರಾಗುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಅಧಿಕಾರಿ ಮುಕ್ಕಣ್ಣ, ಮದ್ಲಾಪೂರ್ ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಯೂನಿಸ್ ಬಾಬು, ಸಹ ಶಿಕ್ಷಕರಾದ ದೇವಪ್ಪ, ಶ್ರೀಕಾಂತ್, ಸುಭಾಶ್, ಸಂದೀಪ್, ಮಾಜೀದ್ ಅಲಿ ಖಾನ್, ತಸ್ಲೀಮ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande