ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ , 2 ಜುಲೈ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಆನ್‍ಲೈನ್ ಅರ್ಜಿ ಆ
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ , 2 ಜುಲೈ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸ್‍ಎಸ್‍ಪಿ ಪೋರ್ಟಲ್ https://ssp.karnataka.gov.in ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1 ಲಕ್ಷ ಮೀರಿರಬಾರದು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

2024-25ನೇ ಸಾಲಿನಲ್ಲಿ ಅನುಮೋದನೆಗೊಂಡ ಅರ್ಜಿಗಳು ಹಾಗೂ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಂuಣo ಖeಟಿeತಿಚಿಟ ಎಂದು ಪರಿಗಣಿಸಲಾಗುವುದು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ (NPCI MAPPING ACTIVE) ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.

ಶುಲ್ಕ ಮರುಪಾವತಿಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ಸೈಟ್ https://dom.karnataka.gov.in ಅನ್ನು ವೀಕ್ಷಿಸಬಹುದು,

ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕುಷ್ಟಗಿ: 8861610578, ಗಂಗಾವತಿ: 9986244408, ಯಲಬುರ್ಗಾ: 8095191406 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಜ್ಮೀರ್ ಅಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande