ನವದೆಹಲಿ, 02 ಜುಲೈ (ಹಿ.ಸ.) :
ಆ್ಯಂಕರ್ : ಕೇರಳ ಬಿಜೆಪಿ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಜಮಾತೆ-ಇ-ಇಸ್ಲಾಮಿ ಬೆಂಬಲ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಿಲಂಬೂರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಈ ಸಂಘಟನೆಯ ಬೆಂಬಲದಿಂದ ಗೆದ್ದಿರುವುದಾಗಿ ಆರೋಪಿಸಿ, ಇದು ಭಾರತದ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವ ರಾಜಕೀಯ ಮೈತ್ರಿಯಾಗಿದೆ ಎಂದು ಹೇಳಿದ್ದಾರೆ. ಅವರು ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಬಹುಮುಖ ರಾಜಕೀಯ ಮಾಡುತ್ತಿದೆ. ಅವರು ಸಂವಿಧಾನ ಬೆಂಬಲದ ಮಾತು ಆಡುತ್ತಾರೆ, ಆದರೆ ವಾಸ್ತವದಲ್ಲಿ ರಾಷ್ಟ್ರವಿರೋಧಿ ಸಂಘಟನೆಗಳ ಬೆಂಬಲ ಪಡೆಯುತ್ತಾರೆ, ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ.
ವಯನಾಡ್ ಮತ್ತು ನಿಲಂಬೂರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಸಂಘಟನೆಯ ಬೆಂಬಲವನ್ನು ಪಡೆದುಕೊಂಡಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa