ಕಾಲ್ತುಳಿತ : ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ
ಬೆಂಗಳೂರು, 02 ಜುಲೈ (ಹಿ.ಸ.) : ಆ್ಯಂಕರ್ : ಐಪಿಎಲ್ ಪಂದ್ಯದಲ್ಲಿ ಜಯ ಗಳಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮ
Court


ಬೆಂಗಳೂರು, 02 ಜುಲೈ (ಹಿ.ಸ.) :

ಆ್ಯಂಕರ್ : ಐಪಿಎಲ್ ಪಂದ್ಯದಲ್ಲಿ ಜಯ ಗಳಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ.

ಸಿಎಟಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ನ್ಯಾಯಪೀಠಕ್ಕೆ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ನಾಳೆ (ಗುರುವಾರ) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

2025ರ ಜೂನ್‌ 4ರಂದು ನಡೆದ ಆರ್‌ಸಿಬಿ ವಿಜಯೋತ್ಸವದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿಸ್ದರು. ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ತಿಳಿಸಿದ್ದ ಸರ್ಕಾರ, ಬೆಂಗಳೂರು ಪೊಲೀಸ್‌ ಆಯುಕ್ತರಾಗಿದ್ದ ಬಿ.ದಯಾನಂದ್‌, ಅರ್ಜಿದಾರ ಅಧಿಕಾರಿ ವಿಕಾಸ್‌ ಕುಮಾರ್‌ ಮತ್ತಿತರರನ್ನು ಅಮಾನತು ಮಾಡಿ ಆದೇಶಿಸಿತ್ತು. ಇದನ್ನು ವಿಕಾಸ್‌ ಕುಮಾರ್‌ ಸಿಎಟಿಗೆ ಪ್ರಶ್ನಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಸಿಎಟಿ, ಸರ್ಕಾರದ ಅಮಾನತ್ತು ಆದೇಶ ರದ್ದುಪಡಿಸಿತ್ತು. ಅಲ್ಲದೇ, ತಕ್ಷಣ ಅರ್ಜಿದಾರರನ್ನು ಅದೇ ಹುದ್ದೆಗೆ ಮರುನಿಯೋಜನೆಗೆ ಮಾಡುವಂತೆ ಆದೇಶದಲ್ಲಿ ತಿಳಿಸಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande