ವಿಜಯಪುರ, 02 ಜುಲೈ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಚಿಗುರು, ಯುವ ಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಆಯೋಜನೆಯ ಉದ್ದೇಶದಿಂದ ಇಲಾಖೆಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಗುರು,ಯುವ ಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ಅರ್ಜಿ ಸಲ್ಲಿಸಬಹುದು.
ಚಿಗುರು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು 8 ರಿಂದ 14 ವರ್ಷದ ಪ್ರತಿಭಾವಂತ ಬಾಲ ಪ್ರತಿಭೆಗಳಾಗಿರಬೇಕು. ಯುವ ಸೌರಭ ಕಾರ್ಯಕ್ರಮಕ್ಕೆ ಭಾಗವಹಿಸುವವರು 15 ರಿಂದ 30 ವರ್ಷದ ಪ್ರತಿಭಾವಂತ ಯುವ ಕಲಾವಿದರಾಗಿರಬೇಕು.
ಆಕಾಶವಾಣಿ ಗ್ರೇಡ್‍ಗಳ ಕಲಾವಿದರನ್ನು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರನ್ನು ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತದೆ.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಚಿಸುವ ಕಲಾವಿದರು ಅಗತ್ಯ ದಾಖಲೆ ಸಹಿತ ಅರ್ಜಿಯನ್ನು ಜುಲೈ 08 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ಇಲ್ಲಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352251261 ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande