ಹಲವು ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
ಕೊಪ್ಪಳ, 02 ಜುಲೈ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್
ಹಲವು ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ


ಕೊಪ್ಪಳ, 02 ಜುಲೈ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿರುತ್ತದೆ.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜು. 15ರ ವರೆಗೆ ಸರಾಸರಿ 2000 ಕ್ಯೂಸೆಕ್ಸ್ ನಂತೆ, ಜು. 16 ರಿಂದ ಜು. 31ರ ವರೆಗೆ 3000 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 4100 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜು. 10 ರಿಂದ ಜು. 31ರ ವರೆಗೆ ಸರಾಸರಿ 700 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 1300 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಜು. 10 ರಿಂದ ಜು. 31 ರವರೆಗೆ ಸರಾಸರಿ 500 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 650 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ರಾಯ ಬಸವಣ್ಣ ಕಾಲುವೆಗೆ ಜೂನ್ 1 ರಿಂದ ನವೆಂಬರ್ 30ರ ವರೆಗೆ ಸರಾಸರಿ 220 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಜುಲೈ 1 ರಿಂದ 25 ಕ್ಯೂಸೆಕ್ಸ್‍ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ನದಿಗೆ ಪೂರಕ ಸುಮಾರು 150 ಕ್ಯೂಸೆಕ್ಸ್‍ನಂತೆ ನದಿ ಪೂರಕಕಾರ್ಖಾನೆ ಒಳಗೊಂಡಂತೆ ನೀರು ಹರಿಸಲು ನಿರ್ಧರಿದ್ದು, ನೀರಿನ ಲಭ್ಯೆತೆಯನ್ನು ಆಧರಿಸಿ ನಿಂತ ಬೆಳಗಳನ್ನು ಸಂರಕ್ಷಿಸಲಾಗುವುದು.

ರೈತ ಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ. ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ/ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು.

ಪ್ರಸಕ್ತ ಸಾಲಿನ 223ನೇ ತುಂಗಭದ್ರಾ ಮಂಡಳಿ ಸಭೆಯಲ್ಲಿ ಜಲಾಶಯದಲ್ಲಿ 80 ಟಿ.ಎಂ.ಸಿ ಯಷ್ಟು ನೀರನ್ನು ಮಾತ್ರ ಸಂಗ್ರಹಣೆ ಮಾಡಲು ನಿರ್ದರಿಸಿರುವುದರಿಂದ ಹಾಗೂ ಪ್ರಸ್ತುತ ತುಂಗಭದ್ರಾ ಜಲಾಶಯಕ್ಕೆ ಮುಂಬರುವ ದಿನಗಳಲ್ಲಿ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಆವಲಂಭಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‍ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande