ಮೊಬೈಲ್ ಆಪ್‍ನಲ್ಲಿ ಬೆಳೆ ವಿವರ ದಾಖಲಿಸಲು ರೈತರಿಗೆ ಮನವಿ
ವಿಜಯಪುರ, 02 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆ
ಮೊಬೈಲ್ ಆಪ್‍ನಲ್ಲಿ ಬೆಳೆ ವಿವರ ದಾಖಲಿಸಲು ರೈತರಿಗೆ ಮನವಿ


ವಿಜಯಪುರ, 02 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.

ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‍ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ.ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ದಿನಾಂಕ : 31-08-2025ರವರೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ತಾವೇ ಕೈಗೊಳ್ಳಲು ಸಾಧ್ಯವಾಗದಿದ್ದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ವಿವಿಧ ಬೆಳೆಗಳ ಮಾಹಿತಿಯನ್ನು ಖಾಸಗಿ ನಿವಾಸಿಗಳ ಮೂಲಕ ಖುದ್ದಾಗಿ ಕ್ಷೇತ್ರದಲ್ಲಿದ್ದು, ದಿನಾಂಕ :15-08-2025 ರಿಂದ 30-09-2025ರೊಳಗಾಗಿ ನಿಖರವಾಗಿ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಬೆಳೆ ಸಮೀಕ್ಷೆ ಆಪ್‍ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಉಪಯೋಗಿಸಲಾಗುವುದು. ಈ ನಿಟ್ಟಿನಲ್ಲಿ ಸ್ವತ: ರೈತರೇ ತಮ್ಮ ಮೊಬೈಲ್ ಆಪ್ ಮೂಲಕ ಸಕಾಲಿಕವಾಗಿ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪಲೊಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಿ, ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಬಹುದಾಗಿದ್ದು,ಜಿಲ್ಲೆಯ ರೈತರು ಈ ಯೋಜನೆ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ನಿಗದಿತ ಸಮಯದೊಳಗೆ ದಾಖಲಿಸಬೇಕು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮಕ್ಕೆ ನಿಯೋಜಿಸಲಾದ ಖಾಸಗಿ ನಿವಾಸಿ(ಪಿಆರ್)ಗಳನ್ನು ಅಥವಾ ಕೃಷಿ,ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande