5 ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ
ಬೆಂಗಳೂರು, 02 ಜುಲೈ (ಹಿ.ಸ.) : ಆ್ಯಂಕರ್ : ಪೂರ್ಣಾವಧಿಗೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸೆಪ್ಟೆಂಬರ್​ನಲ್ಲಿ ಮುಖ್ಯಮಂತ್ರಿ ಬದಲಾವಣೆ ಅಗಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪ
Govt


ಬೆಂಗಳೂರು, 02 ಜುಲೈ (ಹಿ.ಸ.) :

ಆ್ಯಂಕರ್ : ಪೂರ್ಣಾವಧಿಗೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸೆಪ್ಟೆಂಬರ್​ನಲ್ಲಿ ಮುಖ್ಯಮಂತ್ರಿ ಬದಲಾವಣೆ ಅಗಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಶುದ್ಧ ಸುಳ್ಳು ಹೇಳುತ್ತಾರೆ. ನಾನು ಈಗಾಗಲೇ ಮೈಸೂರಿನಲ್ಲಿ ಹೇಳಿದ್ದೇನೆ. ನಮ್ಮ ಸರ್ಕಾರ ಬಂಡೆಯಂತೆ ದೃಢವಾಗಿ ಇರಲಿದೆ. ನಾವೆಲ್ಲರೂ ಒಗ್ಗಟ್ಟಿನಲ್ಲಿ ಇದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಅವರು ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅವರ ಸೇವೆ ಏನೆಂಬುದನ್ನು ಅವರೇ ತಿಳಿಸಲಿ. ಮೊದಲು ಬಿಜೆಪಿಯವರು ಹಗಲು ಕನಸು ಕಾಣುವುದನ್ನು ಬಿಡಲಿ ಎಂದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಅಗಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಉಪ‌ ಮುಖ್ಯಮಂತ್ರಿ ಶಿವಕುಮಾರ್, ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ? ಎಂದು ​ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದಲ್ಲಿ ಶಿಸ್ತು ಮುಖ್ಯ. ನನ್ನ ಹೆಸರು ಹೇಳಿ, ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇರುವಾಗ ಈ ಕುರಿತು ಸ್ವ ಪಕ್ಷದ ಶಾಸಕರ ಹೇಳಿಕೆ ಅಸಂಬದ್ಧ, ಈ ರೀತಿ ಹೇಳಿಕೆ ನೀಡುವವರಿಗೆ ನೋಟಿಸ ನೀಡಲಾಗುವುದು ಎಂದು ತಿಳಿಸಿದರು.

ನಾನೊಬ್ಬನೆ‌ ಪಕ್ಷ‌ ಕಟ್ಟಿಲ್ಲ ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ ಎಂದು ಹೇಳಿದರು.

ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ‌ ಎ‌ದುರು ಶಾಸಕರು ತಮ್ಮ‌ ಅಭಿಪ್ರಾಯ ಹೇಳಿಕೊಂಡಿದ್ದಾರೆ, ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ. ಪಕ್ಷದಲ್ಲಿ ಎಲ್ಲಿಯೂ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗು ಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಕರ್ನಾಟಕ ಕಾಂಗ್ರೆಸ್ ಸರಕಾರ ಮತ್ತು ಪಕ್ಷದಲ್ಲಿ ಮುಸುಕಿನ ಗುದ್ದಾಟ ಮುಂದುವರೆದಿದ್ದು, ನಾಯಕತ್ವ ಬದಲಾವಣೆ ಕುರಿತು ಕಾಲವೇ ಉತ್ತರಿಸಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande