ಇಸ್ಲಾಮಾಬಾದ್, 02 ಜುಲೈ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಈ ಮೊಕದ್ದಮೆ ವಿಚಾರಣೆಗೆ ನ್ಯಾಯಾಲಯದ ಅಧಿಕಾರವ್ಯಾಪ್ತಿಯನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಖಾನ್ ಅವರ ಕಾನೂನು ತಂಡ, ಮೇಲ್ಮನವಿ ವಿಚಾರಣೆ ಸಂಪೂರ್ಣವಾಗಿ ಮುಗಿಯುವವರೆಗೆ ಮಾನನಷ್ಟ ಪ್ರಕರಣದ ವಿಚಾರಣೆಗೆ ತಡೆ ನೀಡುವಂತೆ ಕೋರಿದೆ.
2017ರ ಮಾನನಷ್ಟ ಮೊಕದ್ದಮೆ ಕುರಿತಂತೆ, ಶಹಬಾಜ್ ಅವರು 10 ಬಿಲಿಯನ್ ರೂ.ಗಳ ಪರಿಹಾರವನ್ನು ಕೋರಿದ್ದಾರೆ. ಖಾನ್ ಈ ಆರೋಪಗಳನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಮಾಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa