ನವದೆಹಲಿ, 02 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ದೇಶಗಳ ಪ್ರವಾಸಕ್ಕಾಗಿ ನವದೆಹಲಿಯಿಂದ ತೆರಳಿದರು.
ಹೊರಡುವ ಮೊದಲು ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಈ ಪ್ರವಾಸವು ಜಾಗತಿಕ ದಕ್ಷಿಣದೊಂದಿಗೆ ಭಾರತದ ಸ್ನೇಹ ಸಂಬಂಧಗಳನ್ನು ಬಲಪಡಿಸುತ್ತದೆ” ಎಂದು ತಿಳಿಸಿದ್ದಾರೆ.
ಘಾನಾ ಸಂಸತ್ತಿನಲ್ಲಿ ಭಾಷಣ ಮಾಡಲಿರುವ ಮೋದಿ, ಬ್ರೆಜಿಲ್‌ನ ರಿಯೋ ಡಿ ಜನೈರೋದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅರ್ಜೆಂಟೀನಾ ಮತ್ತು ಬ್ರೆಜಿಲ್‌ಗೆ ದ್ವಿಪಕ್ಷೀಯ ಭೇಟಿಯು ಬಹು ವರ್ಷಗಳ ಬಳಿಕ ನಡೆಯುತ್ತಿದ್ದು, ನಮಿಬಿಯಾ ಸಂಸತ್ತಿನ ಜಂಟಿ ಅಧಿವೇಶನಕ್ಕೂ ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿ ಮೋದಿ, “ಈ ಪ್ರವಾಸವು ಭಾರತ-ಆಫ್ರಿಕಾ ಮತ್ತು ಲ್ಯಾಟಿನ್ ಅಮೆರಿಕಾದ ಸಂಬಂಧಗಳಿಗೆ ಹೊಸ ಚೈತನ್ಯ ನೀಡುತ್ತದೆ. ಬಹುಪಕ್ಷೀಯ ವೇದಿಕೆಗಳಲ್ಲಿ ನಮ್ಮ ತೊಡಗಿಕೆಯನ್ನು ಗಟ್ಟಿಗೊಳಿಸುತ್ತದೆ” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa