ರಾಯಚೂರು, 02 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ತಾಲೂಕಿನ ಕಲ್ಮಲಾ ಗ್ರಾಮ ಪಂಚಾಯತಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆರೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದಾರೆ.
ಕೆರೆ ಕಾಮಗಾರಿಯನ್ನು ವೀಕ್ಷಣೆ ನಡೆಸಿ ಮಾತನಾಡಿದ ಸಿಇಓ ಅವರು, ಇನ್ನು ಸ್ವಲ್ಪ ದಿನಗಳಲ್ಲಿ ಕಾಲುವೆಗೆ ನೀರು ಬಿಡುತ್ತಿದ್ದು, ಈ ಹಿನ್ನೆಲೆಯಲ್ಲಿ ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ವಾರದೊಳಗಾಗಿ ಪಿಚ್ಚಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸ್ಥಳದಲ್ಲಿದ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಕಿರಿಯ ಅಭಿಯಂತರರು ಪಿಡಿಓ ಹಾಗೂ ಗ್ರಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್