ಶಿವಮೊಗ್ಗ, 02 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ, ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಲಾರಿ, ಮಂಗಳೂರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಐವರು ಇದ್ದಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa