ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮಾನವಿ ಪುರಸಭೆ ಅರ್ಜಿ ಆಹ್ವಾನ
ರಾಯಚೂರು, 02 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಮಾನವಿ ಪುರಸಭೆಯಿಂದ 2025-26ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನೆಗೆ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯರು, ತೃತೀಯ ಲಿಂಗಿಗಳು, ಎಸ್.ಸ
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮಾನವಿ ಪುರಸಭೆ ಅರ್ಜಿ ಆಹ್ವಾನ


ರಾಯಚೂರು, 02 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಮಾನವಿ ಪುರಸಭೆಯಿಂದ 2025-26ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಗೆ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯರು, ತೃತೀಯ ಲಿಂಗಿಗಳು, ಎಸ್.ಸಿ/ಎಸ್‍ಟಿ/ ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿ.ಎಮ್.ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಆಧಾರ್ ಕಾರ್ಡ್, ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು ( ಕ್ರಯ ಪತ್ರ / ದಾನಪತ್ರ / ಉಡುಗೊರೆ ಪತ್ರ / ಖಾತಾ ಉತಾರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ., ಪಡಿತರ ಚೀಟಿ, ಬ್ಯಾಂಕ್‍ಪಾಸ್ ಬುಕ್ ಪ್ರತಿ, ನಿಗಧಿತ ನಮೂನೆ ಅರ್ಜಿ, ಮೊಬೈಲ್ ಸಂಖ್ಯೆ ಹಾಗೂ ಪ್ಯಾನ್‍ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ) ನೊಂದಿಗೆ ಅರ್ಜಿಗಳನ್ನು https://pmay-urban.gov.in ನಲ್ಲಿ ಜುಲೈ 15ರೊಳಗಾಗಿ ಸಲ್ಲಿಸಿ, ಈ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣೀಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಶಾಖೆಯ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸುವಂತೆ ಮಾನವಿ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande