ಗದಗ, 02 ಜುಲೈ (ಹಿ.ಸ.) :
ಆ್ಯಂಕರ್ : ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ತರವಾಗಿದೆ ಬಡ ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಸಂತೋಷ ತಂದಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ ಬಿ ಅಸೂಟಿ ಹೇಳಿದರು.
ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಜುಲೈ 2 ರಿಂದ 4 ವರೆಗೆ ಪ್ರದರ್ಶಿಸುವ ಕರ್ನಾಟಕ ಸರ್ಕಾರದ 2ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರದ ಯೋಜಗಳ ಮಾಹಿತಿಗಳ ವಸ್ತು ಪ್ರದರ್ಶನ ಕುರಿತು ತಮ್ಮ ಅನಿಸಿಕೆಗಳನ್ನು ಪುಸ್ತಕದಲ್ಲಿ ಬರೆಯುವ ಮೂಲಕ ವ್ಯಕ್ತಪಡಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರಕಾರದ ಸಾಧನೆಗಳನ್ನು ಬಿಂಬಿಸುವ ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ನೀಡುವ ವಸ್ತು ಪ್ರದರ್ಶನ ಹಮ್ಮಿಕೊಂಡಿರುವುದು ಶ್ಲಾಘನೀಯವಾದುದು ಎಂದರು.
ಗೃಹ ಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆ ಯನ್ನು ಸಹಕಾರಿಯಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 2,46,039 ಫಲಾನುಭವಿಗಳಿಗೆ 688.90 ಕೋಟಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಮಾಡಲಾಗಿದೆ ಹಾಗೂ ಹಸಿವು ಮುಕ್ತ ಕರ್ನಾಟಕ ಮಾಡುವ ದೃಡ ಸಂಕಲ್ಪದಿಂದ ಪ್ರತಿಯೊಬ್ಬ ಪಡಿತರದಾರರಿಗೆ ತಲಾ 10 ಕೆ ಜಿ ಆಹಾರ ಧಾನ್ಯ ಒದಗಿಸಲಾಗುತ್ತಿದೆ, ಗೃಹಜ್ಯೋತಿ ಯೋಜನೆಯಿಂದ ಉಚಿತ ಬೆಳಕು ನೀಡಿ ಸುಸ್ಥಿರ ಬದುಕನ್ನು ನಡೆಸಲು ಸಹಕಾರಿಯಾಗಿದೆ ಇಲ್ಲಿಯವರೆಗೆ 2,68,042 ಸ್ಥಾವರಗಳು ನೊಂದಣಿಯಾಗಿದ್ದು ಎಲ್ಲರಿಗು ಉಚಿತ ವಿದ್ಯುತ್ ನೀಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ನಿಜವಾದ ಶಕ್ತಿ ಬಂದಿದ್ದು ಇಲ್ಲಿಯವರೆಗೆ 10.81 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು ಅದಕ್ಕೆ ತಗುಲಿದ 353 ಕೋಟಿ ರೂಗಳನ್ನು ಸರ್ಕಾರ ಭರಣ ಮಾಡಿದೆ,ಹಾಗು ಯುವನಿಧಿಯಲ್ಲಿ ನೊಂದಣಿಯಾದ ಯುವಜನತೆಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದರು.
ಗದಗ ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಟನ ಪ್ರಾಧಿಕಾರ ಸದಸ್ಯ ಕೃಷ್ಣಗೌಡ ಮಾತನಾಡಿ, ಸರ್ಕಾರದ 2 ವರ್ಷದ ಸಾಧನೆ ಆಚರಣೆ ರಾಜ್ಯಾದ್ಯಂತ ಸಂತೋಷದಿಂದ ಆಚರಿಸಲಾಗಿದೆ ಪಂ ಗ್ಯಾರಂಟಿ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ, ಗ್ಯಾರಂಟಿ ಯೋಜನೆ ಮೂಲಕ ಸಾಮಾನ್ಯ ಜನರಿಗೆ ಸ್ವಾಭಿಮಾನದ ಬದುಕನ್ನು ಕಟ್ಟುವಲ್ಲಿ ಯಶಸ್ವಿಯಾಗಿದ್ದೆವೆ ಹಾಗು ಸಮ ಸಮಾಜ ನಿರ್ಮಾಣದ ಜೊತೆಗೆ ಆರ್ಥಿಕವಾಗಿ ಸಮಾನತೆ ಸಹಕಾರಿಯಾಗಿದೆ ಎಂದು ಹೇಳಿದರು.
ರೋಣ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಮಿಥನಗೌಡ ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳು ಅನುಷ್ಟಾನ ಮಾಡುವ ಜೊತೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಿ ರಾಜ್ಯವನ್ನು ಪ್ರಗತಿಯತ್ತ ಸಾಗಿಸುತ್ತಿದ್ದು , ಗ್ಯಾರಂಟಿ ಯಿಂದ ಬಡವರಿಗೆ ಯುವಕರಿಗೆ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಯನ್ನೊಳಗೊಂಡ ಗ್ಯಾರಂಟಿಯ ಸಮರ್ಪಣೆ, ಅಭಿವೃದ್ದಿಯ ಸಂಕಲ್ಪದ 2 ವರ್ಷಗಳ ಸಾಧನಾ ಸಂಭ್ರಮದ ಪುಸ್ತಕವನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರೊಂದಿಗೆ ಪಡೆದುಕೊಳ್ಳುವಂತೆ ಬಿಂಬಿಸುವ ಸೆಲ್ಪಿ ಸಾರ್ವಜನಿಕರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕಬರ್ ಸಾಬ್ ಬಬರ್ಜಿ, ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಮಂದಾಲಿ, ನೀಲಮ್ಮ ಬೋಳಣ್ಣನವರ, ಬಸವರಾಜ ಕಡೇಮನಿ, ಶಂಭು ಕಾಳೆ, ಸಂಗಮೇಶ ಕೆರಕಲಮಟ್ಟಿ, ಸಾವಿತ್ರಿ ಹೂಗಾರ, ದೇವರಡ್ಡಿ ತಿರ್ಲಾಪುರ, ಗಣೇಶ ಮಟ್ಟಾಲಿ, ಸಂಗಮೇಶ ಹಾದಿಮನಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಮಹಿಳಾ ಮತ್ತು ಮಕ್ಕಳ ನಿರೂಪಣಾಧಿಕಾರಿ ರಾಧಾ ಮಣ್ಣೂರು, ಹುಲಿಗೆಮ್ಮ ಜೋಗೆರ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP