ಬೆಂಗಳೂರು, 20 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬಸವನಗುಡಿಯ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ಮುಜರಾಯಿ ಇಲಾಖೆ ಹಾಗೂ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಆಶ್ರಯದಲ್ಲಿ ‘ಆಗಮ ಘಟಿಕೋತ್ಸವ - 2025’ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅರ್ಚಕರಿಗೆ ಪ್ರಮಾಣಪತ್ರ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು ಘಾಟಿ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಮಂತ್ರಾಲಯದ ರಥಬೀದಿ ಮಾದರಿಯಲ್ಲಿ ಅಭಿವೃದ್ಧಿ ನಡೆಯಲಿದೆ. ರಾಜ್ಯದ ‘ಸಿ’ ವರ್ಗದ 34,217 ದೇವಾಲಯಗಳ ಅಭಿವೃದ್ಧಿಗೆ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳ ಆದಾಯದ ಶೇ.10ರಷ್ಟು ಸಾಮಾನ್ಯ ನಿಧಿಗೆ ವರ್ಗಾವಣೆ ಮಾಡಲು ತಿದ್ದುಪಡಿ ವಿದೇಯಕ ತರಲಾಗಿದ್ದು, ರಾಷ್ಟ್ರಪತಿಗೆ ಸಲ್ಲಿಸಲಾಗಿದೆ ಎಂದರು.
ಸಮಾರಂಭದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಶಾಸಕರಾದ ಉದಯ್ ಗರುಡಾಚಾರ್, ರವಿ ಸುಬ್ರಹ್ಮಣ್ಯ, ಶರವಣ್, ಧಾರ್ಮಿಕ ಪರಿಷತ್ ಅಧ್ಯಕ್ಷ ಕೆ.ಎಂ. ನಾಗರಾಜು, ಆಯುಕ್ತ ವೆಂಕಟೇಶ್, ಅರ್ಚಕರ ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa