ಸರ್ವಪಕ್ಷ ಸಭೆ : ಎಲ್ಲ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧ — ಕಿರಣ್ ರಿಜಿಜು
ನವದೆಹಲಿ, 20 ಜುಲೈ (ಹಿ.ಸ.) : ಆ್ಯಂಕರ್ : ಸಂಸತ್ತಿನ ಮಳೆಗಾಲ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ್, ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆ, ಪಹಲ್ಗಾಮ್ ದಾಳಿ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸ
All party meeting


ನವದೆಹಲಿ, 20 ಜುಲೈ (ಹಿ.ಸ.) :

ಆ್ಯಂಕರ್ : ಸಂಸತ್ತಿನ ಮಳೆಗಾಲ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ್, ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆ, ಪಹಲ್ಗಾಮ್ ದಾಳಿ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 51 ಪಕ್ಷಗಳ 54 ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯು ರಚನಾತ್ಮಕವಾಗಿದ್ದು, ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಈ ಅಧಿವೇಶನದಲ್ಲಿ 17 ಮಸೂದೆಗಳು ಚರ್ಚೆಗೆ ಬರಲಿದ್ದು, 8 ಹೊಸ ಮಸೂದೆಗಳನ್ನು ಪರಿಚಯಿಸಲಾಗುತ್ತಿದೆ.

ಸರ್ಕಾರ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿಯೂ ಸದನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು. ಸಣ್ಣ ಪಕ್ಷಗಳಿಗೂ ಸಮಾನ ವೇದಿಕೆ ನೀಡಲು ನಾವು ಬದ್ಧ, ಎಂದು ಕಿರಣ ರಿಜಿಜು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande