ಸಿಂಧನೂರಲ್ಲಿ ಹೊಟೆಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲು
ರಾಯಚೂರು, 20 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ದೂರಿನನನ್ವಯ ಜುಲೈ 18ರಂದು ಜಿಲ್ಲೆಯ ಸಿಂಧನೂರು ನಗರದ ಸಹನಾ ಆಸ್ಪತ್ರೆ ಎದುರುಗಡೆ ಇರುವ ಹೋಟೆಲ್ ಮೇಲೆ ಹಠಾತ್ ದಾಳಿ ನಡೆಸಿ ಬಾಲಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಹೊಟೆಲ್ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು
ಸಿಂಧನೂರಲ್ಲಿ ಹೊಟೆಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲು


ರಾಯಚೂರು, 20 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ದೂರಿನನನ್ವಯ ಜುಲೈ 18ರಂದು ಜಿಲ್ಲೆಯ ಸಿಂಧನೂರು ನಗರದ ಸಹನಾ ಆಸ್ಪತ್ರೆ ಎದುರುಗಡೆ ಇರುವ ಹೋಟೆಲ್ ಮೇಲೆ ಹಠಾತ್ ದಾಳಿ ನಡೆಸಿ ಬಾಲಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಹೊಟೆಲ್ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರಡಿ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಾರ್ಮಿಕನ್ನು ಕೆಲಸದಿಂದ ಬಿಡುಗಡೆಗೊಳಿಸಿ 8ನೇ ತರಗತಿಗೆ ದಾಖಲು ಮಾಡಿ ಮಗುವನ್ನು ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥರೆಡ್ಡಿ, ಸಿಂಧನೂರು ಕಾರ್ಮಿಕ ನಿರೀಕ್ಷಕರಾದ ವಿಜಯಲಕ್ಷ್ಮೀ, ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಿಆರ್‍ಪಿ ಚನ್ನವೀರಗೌಡ ಅವರು ಕಾರ್ಯಾಚರಣೆಯಲ್ಲಿದ್ದರು.

ಸಾರ್ವಜನಿಕರಲ್ಲಿ ಮನವಿ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ.ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನುಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡಬಹುದಾಗಿದೆ ಎಂದು ಇದೆ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande