ಧಾರವಾಡ, 20 ಜುಲೈ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್, ಧಾರವಾಡ ವತಿಯಿಂದ ಪದ್ಮಭೂಷಣ, ಸ್ವರ ಸಾಮ್ರಾಟ ಪಂ. ಬಸವರಾಜ ರಾಜಗುರು ಅವರ 34ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 21, 2025 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡದ ಹೊಸಯಲ್ಲಾಪುರದಲ್ಲಿರುವ ಪಂ. ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕ ಸ್ಥಳದಲ್ಲಿ ಏರ್ಪಡಿಸಲಾಗಿದೆ.
ಪಂ.ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಚನ್ನೂರ, ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಹಾಗೂ ಟ್ರಸ್ಟ್ ಸದಸ್ಯೆ ಭಾರತಿದೇವಿ ರಾಜಗುರು, ಡಾ. ಮುದ್ದುಮೋಹನ್, ಡಾ. ಜಿ.ಎಂ.ಹೆಗಡೆ, ಡಾ. ಉದಯಕುಮಾರ ದೇಸಾಯಿ, ನಿಜಗುಣ ರಾಜಗುರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪಂ.ಬಸವರಾಜ ರಾಜಗುರು ಅವರ ಶಿಷ್ಯರು ಮತ್ತು ಸಂಗೀತ ಅಭಿಮಾನಿಗಳು ಭಾಗವಹಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa