ಕೊಪ್ಪಳ, 20 ಜುಲೈ (ಹಿ.ಸ.) :
ಆ್ಯಂಕರ್: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್‍ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಭೇಟಿ ನೀಡಿದ್ದಾರೆ.
ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ರೂ. 83.79 ಕೋಟಿಗಳ ಅಂದಾಜು ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಡಿ ಸ್ಥಾಪನೆಯಾಗುತ್ತಿದ್ದು, ಇದರ ರೂಪರೇμÉಗಳು, ಟೆಂಡರ್ ಪ್ರಕ್ರೀಯೆ ಮತ್ತು ಪಾರ್ಕ್‍ಗೆ ಸಂಬಂಧಿಸಿದ ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ.ಎಸ್., ಇ ಆ್ಯಂಡ್ ವೈ ಕಂಪನಿಯ ಅಧಿಕಾರಿ ಶಿವಪ್ರಕಾಶ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕರಾದ ಕೃಷ್ಣ ಉಕ್ಕುಂದ, ಕನಕಗಿರಿ ತಹಶೀಲ್ದಾರ ವಿಶ್ವನಾಥ ಮುರಡಿ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್