ಧಾರವಾಡ, 20 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಜುಲೈ 26, 2025 ರಂದು ಬೆಳಿಗ್ಗೆ 8:30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಬಳಿ ಇರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆದುದರಿಂದ ಎಲ್ಲಾ ಮಾಜಿ ಸೈನಿಕರು, ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa