ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣ : ತನಿಖೆಗೆ ಎಸ್ಐಟಿ ರಚನೆ
ಬೆಂಗಳೂರು, 20 ಜುಲೈ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಮನುಷ್ಯನ ತಲೆಬುರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆ
Sit


Sit


ಬೆಂಗಳೂರು, 20 ಜುಲೈ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಮನುಷ್ಯನ ತಲೆಬುರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ.

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಸಮಗ್ರ ಮತ್ತು ನಿಷ್ಪಕ್ಷ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಪತ್ರ ಬರೆದಿತ್ತು.

8

ಈ ಪ್ರಕರಣದ ಕುರಿತಂತೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂಬುದಾಗಿ ಸಾರ್ವಜನಿಕ ವಲಯದಿಂದಲೂ ಅಭಿಪ್ರಾಯ ಮತ್ತು ಒತ್ತಾಯಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಠಾಣೆಗಳಲ್ಲಿ ದಾಖಲಾಗಿರುವ ಮತ್ತು ದಾಖಲಾಗುವ ಎಲ್ಲ‌ ಕ್ರಿಮಿನಲ್ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್‌ಐಟಿ ನಡೆಸಲಿದೆ.

ವಿಶೇಷ ತನಿಖಾ ತಂಡವು ಕೈಗೊಳ್ಳುವ ಪ್ರಕರಣದ ತನಿಖೆಯ, ತನಿಖಾ ಪ್ರಗತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆಗಿಂದಾಗ್ಗೆ ವರದಿ ಮಾಡುವಂತೆ ಸರ್ಕಾರವು ಆದೇಶಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande